ಧಾರವಾಡ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ವಿಡಿಯೊ ಹರಿಯಬಿಟ್ಟ ಬೆಂಗಳೂರು ಮೂಲದ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಶನಿವಾರ ವಿದ್ಯಾಗಿರಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು.
‘ಸಿದ್ಧರಾಮಯ್ಯ ಅವರ ವಿರುದ್ಧ ಬೆಂಗಳೂರಿನ ನಿವಾಸಿ ಪುನೀತ ಕೆರೆಹಳ್ಳಿ ಎಂಬ ವ್ಯಕ್ತಿಯು ಅವಹೇಳನಕಾರಿಯಾಗಿ ಮಾತನಾಡಿ, ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಇದರಿಂದ ಸಿದ್ಧರಾಮಯ್ಯ ಅವರ ಹಾಗೂ ಕುರುಬ ಜನಾಂಗಕ್ಕೆ ಧಕ್ಕೆ ಉಂಟಾಗಿದೆ’ ಎಂದು ಆರೋಪಿಸಿದ್ದಾರೆ.
‘ಈ ಕೂಡಲೇ ಆ ವ್ಯಕ್ತಿಯನ್ನು ಬಂಧಿಸಿ, ಜನಪ್ರತಿನಿಧಿ ಕಾಯ್ದೆ ಮತ್ತು ಜನರ ಹಾಗೂ ಸಮುದಾಯದ ಭಾವನೆಗಳನ್ನ ಧಕ್ಕೆ ಉಂಟು ಮಾಡಿದ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಧರಣಿ ನಿರತರು ಒತ್ತಾಯಿಸಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಬಸವರಾಜ ಮಲಕಾರಿ,ಜಿಲ್ಲಾ ಯುವ ಕುರುಬರ ಸಂಘದ ಅಧ್ಯಕ್ಷ ರಮೇಶ ನಲವಡಿ, ಯಮನಪ್ಪ ಮೇಟಿ, ತುಳಸಪ್ಪ ಪೂಜಾರ, ಬಸವರಾಜ ತಿದಿ, ಮಂಜುನಾಥ ಹೊಸಮನಿ, ಸುರೇಖಾ ಪೂಜಾರ, ಪ್ರವೀಣ ಗೊಕಾವಿ, ಸಂತೋಷ ಕಾಡಸಿದ್ದಣ್ಣವರ, ರವಿ ಐರಾಣಿ, ಜುಂಜಪ್ಪ ಕಂಬಳಿ, ಮುಸ್ತಾಕ್ ಪಟೇಲ್, ಮಂಜುನಾಥ ಧೂಳಿಕೊಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.