ನವಲಗುಂದ: ತಾಲ್ಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ. ಆದ್ದರಿಂದ ಯಾರೇ ಟೀಕಿಸಿದರೂ ಅವರಿಗೆ ಅಭಿವೃದ್ಧಿಯ ಮೂಲಕ ಉತ್ತರ ನೀಡುತ್ತೇನೆ ಎಂದು ಜವಳಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.
ತಾಲ್ಲೂಕಿನ ಜಾವುರ ಗ್ರಾಮ ಪಂಚಾಯ್ತಿ ಹಾಗೂ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಹಾಗೂ ನವಗ್ರಾಮದ 4.18 ಎಕರೆಯಲ್ಲಿ ₹40.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಹಾಗೂ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ವಿರಕ್ತಿಮಠ ಸ್ವಾಮೀಜಿ, ಮೇಲಿಗರಿಗೌಡ ಪಾಟೀಲ, ಗುರುಶಾಂತಯ್ಯ ಹಿರೇಮಠ, ಕಲ್ಲನಗೌಡ್ರ, ಶಂಕ್ರಗೌಡ್ರ ಪಾಟೀಲ, ಮುತ್ತಣ್ಣ ಮಣಮಿ, ಚಂದ್ರು ಹುಲ್ಮನಿ, ಅಡವೆಪ್ಪ ಮನಮಿ, ಎಫ್‌ಪಿಒ ಅಧ್ಯಕ್ಷ ಗಂಗಾಧರ ಗಾಣಿಗೇರ, ಬಸಣ್ಣ ಬೆಳವಣಕಿ, ಕೃಷಿ ವಿ.ವಿ ಉಪಕುಲಪತಿ ಪಿ.ಎಲ್. ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.