ಹುಬ್ಬಳ್ಳಿ: ‘ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಿರುವುದು ಸ್ವಾಗತಾರ್ಹ’ ಎಂದು ವರೂರಿನ ಗುಣಧರನಂದಿ ಮಹಾರಾಜರು ಸೋಮವಾರ ಹೇಳಿದರು.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಕಾನೂನು, ಸರ್ಕಾರದ ಮೇಲೆ ವಿಶ್ವಾಸ ಇದೆ. ಪ್ರಕರಣದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಆಗುತ್ತಿದೆ. ಆದಷ್ಟು ಬೇಗ ತನಿಖೆ ಮುಗಿಸಬೇಕು’ ಎಂದರು.
‘ತನಿಖೆ ವರದಿಯಿಂದ ಸತ್ಯಾಂಶ ತಿಳಿದ ಬಳಿಕ ಮಂಜುನಾಥಸ್ವಾಮಿಯ ಲಕ್ಷಾಂತರ ಭಕ್ತರ ಸೇರಿಸಿ ವಿಜಯೋತ್ಸವ ಆಚರಿಸಲಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಲಾಗುವುದು’ ಎಂದರು.
‘ವೀರೇಂದ್ರ ಹೆಗ್ಗಡೆಯವರು ಸತ್ಯ, ನ್ಯಾಯದ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಅವರೊಂದಿಗೆ ಎರಡು ದಶಕಗಳ ಒಡನಾಟವಿದೆ. ಹೆಗ್ಗಡೆಯವರ ಶಿಕ್ಷಣ, ಸಮಾಜಸೇವೆ ಕಾರ್ಯ ಸಹಿಸಿಕೊಳ್ಳಲು ಕೆಲವರಿಗೆ ಆಗುತ್ತಿಲ್ಲ. ಹೀಗಾಗಿ ಕಳಂಕ ತರುವ ಷಡ್ಯಂತ್ರ ನಡೆಯುತ್ತಿದೆ’ ಎಂದು ತಿಳಿಸಿದರು.
‘ಜೈನ ಧರ್ಮ, ರಾಜ ಮಹಾರಾಜರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುತ್ತಿರುವುದನ್ನು ಖಂಡಿಸಿ ಹೋರಾಟ ರೂಪಿಸಲು ಆಗಸ್ಟ್ 10ರಂದು ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜೈನ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.