ADVERTISEMENT

ಹುಬ್ಬಳ್ಳಿ | ಧರ್ಮಸ್ಥಳ ಪ್ರಕರಣದಲ್ಲಿ ವೈಯಕ್ತಿಕ ಆರೋಪ ಬೇಡ: ಮಹೇಶ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 2:57 IST
Last Updated 22 ಜುಲೈ 2025, 2:57 IST
ಮಹೇಶ ಟೆಂಗಿನಕಾಯಿ, ಶಾಸಕ
ಮಹೇಶ ಟೆಂಗಿನಕಾಯಿ, ಶಾಸಕ   

ಹುಬ್ಬಳ್ಳಿ: ‘ಧರ್ಮಸ್ಥಳ ಕ್ಷೇತ್ರಕ್ಕೆ ಅದರದ್ದೇ ಆದ ಪಾವಿತ್ರ್ಯತೆ ಇದೆ. ಯಾವುದೋ ಒಂದು ಪ್ರಕರಣವನ್ನು ದೇವಸ್ಥಾನಕ್ಕೆ ತಳುಕು ಹಾಕುವ ಕೆಲಸ ಯಾರೂ ಮಾಡಬಾರದು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡದಿ ಅವರು, ‘ಧರ್ಮಸ್ಥಳ ಕ್ಷೇತ್ರದ ಬಗ್ಗೆ ಹಿಂದೂಗಳು ಪವಿತ್ರ ಭಾವನೆ ಹೊಂದಿದ್ದಾರೆ. ಎಲ್ಲ ಜಾತಿ, ಜನಾಂಗದವರು ಆ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಾರೆ’ ಎಂದರು.

‘ದೇವಸ್ಥಾನ ಹಾಗೂ ಅಲ್ಲಿನ ವ್ಯಕ್ತಿಗಳ ಬಗ್ಗೆ ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ. ಪ್ರಕರಣದ ತನಿಖೆಗಾಗಿ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಸತ್ಯ ಹೊರಬಂದ ನಂತರ ಮಾತಾಡೋಣ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.