ADVERTISEMENT

ಧರ್ಮಸ್ಥಳ ಪ್ರಕರಣ | ತನಿಖೆಯಿಂದ ಸತ್ಯ ಹೊರಬರಲಿ: ಶಾಸಕ ಪ್ರಸಾದ ಅಬ್ಬಯ್ಯ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 5:30 IST
Last Updated 3 ಸೆಪ್ಟೆಂಬರ್ 2025, 5:30 IST
<div class="paragraphs"><p>ಪ್ರಸಾದ ಅಬ್ಬಯ್ಯ </p></div>

ಪ್ರಸಾದ ಅಬ್ಬಯ್ಯ

   

ಹುಬ್ಬಳ್ಳಿ: ’ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೇ ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದ್ದಾರೆ. ಈ ವಿಷಯದಲ್ಲಿ ಬಿಜೆಪಿಯವರು ಯಾಕೆ ವಿಚಲಿತರಾಗಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. 

‘ಬಿಜೆಪಿಯವರು ಮೊದಲು ಎಸ್‌ಐಟಿ ತನಿಖೆ ಸ್ವಾಗತ ಮಾಡಿ ಇವಾಗ ವರಸೆ ಬದಲಿಸಿದ್ದಾರೆ. ಎಸ್‌ಐಟಿ ತನಿಖೆಯಿಂದ ಸತ್ಯ ಹೊರಬರಲಿದೆ. ಇದಕ್ಕೆ ಯಾರೂ ಭಯಪಡುವ ಅವಶ್ಯಕತೆ ಇಲ್ಲ. ಬಿಜೆಪಿಯವರು ಸೌಜನ್ಯ ಪರವೇ ಅಥವಾ ಅಲ್ಲವೇ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ’ ಎಂದರು. 

ADVERTISEMENT

‘ಜಿಎಸ್‌ಟಿಗೆ ಸಂಬಂಧಿಸಿದ ರಾಜ್ಯದ ಪಾಲಿನ ಅನುದಾನವನ್ನು ಕೇಂದ್ರ ಸರ್ಕಾರ ಕೊಡುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದ ಜಂಟಿ ಯೋಜನೆಗಳಿಗೆ ಸಂಬಂಧಿಸಿದ ಅನುದಾನವನ್ನೂ ಮಂಜೂರು ಮಾಡುವಲ್ಲಿ ವಿಳಂಬ ಮಾಡಲಾಗುತ್ತಿದೆ. ಈ ಬಗ್ಗೆ ಬಿಜೆಪಿ ನಾಯಕರು ಹೋರಾಟ ಮಾಡಿ, ರಾಜ್ಯಕ್ಕೆ ಅನುದಾನ ಕೊಡಿಸುವ ಮೂಲಕ ರಾಜ್ಯದ ಪ್ರಗತಿಗೆ ಸಹಕರಿಸಲಿ’ ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.