ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ‘ಮುಸ್ಲಿಂ ಲೀಗ್ ಸೇರಿ ಹಲವು ಹಿಂದೂ ವಿರೋಧಿ ಸಂಘಟನೆಗಳ ಜೊತೆ ಸಂಪರ್ಕ ಇಟ್ಟುಕೊಂಡಿರುವ ಕಾಂಗ್ರೆಸ್, ದೇಶದಲ್ಲಿರುವ ದೇವಾಲಯಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾವುದೋ ಅಯೋಗ್ಯ ಹೇಳಿದ್ದಕ್ಕೆ ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿದರು. ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ವಿರುದ್ಧ ಬಾಯಿಗೆ ಬಂದ ಹಾಗೆ ಮಾತನಾಡಿದರು. ಇಂಥ ಅಯೋಗ್ಯರನ್ನು ಹುಡುಕಿದರೂ ಸಿಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರ್ಮಸ್ಥಳ ಪ್ರಕರಣದ ಹಿಂದೆ ಷಡ್ಯಂತರವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇತ್ತ ಮುಖ್ಯಮಂತ್ರಿ ತನಿಖೆ ನಡೆಸುತ್ತಿದ್ದಾರೆ. ಬದ್ಧತೆಯಿಲ್ಲದ ಸರ್ಕಾರ, ಎರಡು ದೋಣಿಯ ಮೇಲೆ ಕಾಲಿಟ್ಟು ಕೆಲಸ ಮಾಡುತ್ತಿದೆ’ ಎಂದರು.
ಧರ್ಮಸ್ಥಳ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಎಸ್‌ಟಿಐಯಿಂದ ಸತ್ಯಾಂಶ ಹೊರಬರಲಿದೆ. ಷಡ್ಯಂತ್ರ ನಡೆಸಿದವರ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು. ಯೂಟ್ಯೂಬರ್‌ಗಳ ವಿರುದ್ಧ ಅಧಿವೇಶನದಲ್ಲಿ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಬೇಕು.–ಗುಣಧರನಂದಿ ಮಹಾರಾಜ, ವರೂರೂ ನವಗ್ರಹ ತೀರ್ಥ ಕ್ಷೇತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.