ADVERTISEMENT

ಧಾರವಾಡ ಕೃಷಿ ವಿ.ವಿ ವರ್ಗಾವಣೆಯಲ್ಲಿ ಅಕ್ರಮ: ಗಂಗಾಧರ ಕುಲಕರ್ಣಿ ಆರೋಪ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 5:41 IST
Last Updated 13 ಫೆಬ್ರುವರಿ 2026, 5:41 IST
<div class="paragraphs"><p>ಧಾರವಾಡ ಕೃಷಿ ವಿವಿ</p></div>

ಧಾರವಾಡ ಕೃಷಿ ವಿವಿ

   

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಅವ್ಯವಹಾರ, ನಿಯಮಬಾಹಿರವಾಗಿ ವರ್ಗಾವಣೆ ನಡೆದಿರುವ ಆರೋಪಗಳಿದ್ದು, ಈ ಬಗ್ಗೆ ತನಿಖೆಗೆ ಕ್ರಮ ವಹಿಸುವಂತೆ ಸರ್ಕಾರ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಿವಸೇನಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಕುಲಕರ್ಣಿ ಆಗ್ರಹಿಸಿದರು. ‌

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2023 ಸೆ.26ರಂದು ನಡೆದ ವಿವಿಧ ಹುದ್ದೆ ನೇಮಕಾತಿಯ ದಾಖಲೆಗಳನ್ನು ವಿಶ್ವವಿದ್ಯಾಲಯದವರು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದರು. 

ADVERTISEMENT

ನಿಯಮ ಮೀರಿ ವರ್ಗಾವಣೆ ನಡೆಸಲಾಗಿದೆ, ಆರ್ಥಿಕವಾಗಿ ಹೊರೆ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ‌ತಪ್ಪಿತಸ್ಥರಿಂದ ನಷ್ಟ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು. 

ಕೃಷಿ ವಿಶ್ವವಿದ್ಯಾಲಯದಲ್ಲಿ ಅಕ್ರಮಗಳು ನಡೆದಿದ್ದು, ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದೇವೆ ಎಂದರು. 

ಶಿವಸೇನಾ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಾರ್ಥ ಶಿವಶರಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.