
ಧಾರವಾಡ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಎಕೆಎಸ್‌ಎಸ್‌ಎ) ಪ್ರತಿಭಟನೆ ತಡೆ ನಿಟ್ಟಿನಲ್ಲಿ ಸೋಮವಾರ ನಗರದ ವಿವಿಧೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.
ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಸಂಘಟನೆಯವರು ಪ್ರತಿಭಟನೆಗೆ ಮುಂದಾದರೆ ತಡೆಯುವ ನಿಟ್ಟಿನಲ್ಲಿ ಶ್ರೀನಗರ, ಸಪ್ತಾಪುರ ಸಹಿತ ವಿವಿಧೆಡೆಗಳಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.
ಸಪ್ತಾಪುರದ ವಿವಿಧೆಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳ ಸಂಚಾರವನ್ನು ಮಧ್ಯಾಹ್ನದವರೆಗೆ ನಿರ್ಬಂಧಿಸಲಾಗಿತ್ತು. ಮಹಾನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಮಹಾನಿಂಗ ನಂದಗಾವಿ ಸ್ಥಳದಲ್ಲಿದ್ದು ನಿಗಾ ವಹಿಸಿದ್ದರು.
ಸೋಮವಾರ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯವರು ಹೇಳಿದ್ದರು. ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಕೈಬಿಟ್ಟಿರುವುದಾಗಿ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.