ಧಾರವಾಡ: ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಎನ್.ವಿ.ಭರಮನಿ ಅವರು ಸ್ವಯಂ ನಿವೃತ್ತಿ (ವಿಆರ್‌ಎಸ್) ಕೋರಿ ಗೃಹ ಇಲಾಖೆಗೆ ಒಂದು ತಿಂಗಳ ಹಿಂದೆ ಮನವಿ ಸಲ್ಲಿಸಿದ್ದಾರೆ. ಧಾರವಾಡ ಜಿಲ್ಲೆಗೆ ಈಚೆಗೆ ಸೃಜಿಸಿದ್ದ ಎಎಸ್ಪಿ ಹುದ್ದೆಯಲ್ಲಿ ಅವರು ಕರ್ತವ್ಯದಲ್ಲಿ ಇದ್ದಾರೆ.
‘31 ವರ್ಷಗಳಿಂದ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಿವೃತ್ತಿಗೆ 4 ವರ್ಷ ಬಾಕಿ ಇದೆ. ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದೇನೆ. ಇಲಾಖೆ ಇನ್ನೂ ನಿರ್ಧರಿಸಿಲ್ಲ’ ಎಂದು ಎನ್.ವಿ.ಭರಮನಿ ‘ಪ್ರಜಾವಾಣಿ’ಗೆ ತಿಳಿಸಿದರು.
ಬೆಳಗಾವಿಯಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭದ್ರತೆ ವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡು, ವೇದಿಕೆಯಲ್ಲಿ ಎನ್.ವಿ.ಭರಮನಿ ಅವರಿಗೆ ಕೈ ಎತ್ತಿ ರೇಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.