ಹುಬ್ಬಳ್ಳಿಯಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿಯಿತು –ಪ್ರಜಾವಾಣಿ ಚಿತ್ರ/ಗೋವಿಂದರಾಜ ಜವಳಿ
ಹುಬ್ಬಳ್ಳಿ: ಧಾರವಾಡ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಉತ್ತಮ ಮಳೆಯಾಯಿತು.
ಹುಬ್ಬಳ್ಳಿ ನಗರ ಸೇರಿ ಧಾರವಾಡ ಜಿಲ್ಲೆ ವ್ಯಾಪ್ತಿಯ ಕಲಘಟಗಿ, ನವಲಗುಂದ, ಕುಂದಗೋಳ ಭಾಗದಲ್ಲಿ ಮಳೆಯಾಯಿತು. ಜೋರಾಗಿ ಮಳೆಯಾದ ಪರಿಣಾಮ ಹುಬ್ಬಳ್ಳಿಯ ಬಹುತೇಕ ಕಡೆ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು. ಕೆಲ ಕಡೆ ಮರಗಳು ಉರುಳಿ ಬಿದ್ದವು. ಅಲ್ಲಲ್ಲಿ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಯಿತು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸಂಕೇಶ್ವರ ಹಾಗೂ ಯಮಕನಮರಡಿ ಭಾಗದಲ್ಲಿ ಒಂದು ಗಂಟೆಗೂ ಹೆಚ್ಚು ಹೊತ್ತು ಉತ್ತಮ ಮಳೆ ಸುರಿಯಿತು. ಬೆಳಗಾವಿ ನಗರ, ತಾಲ್ಲೂಕಿನಲ್ಲಿ ತುಂತುರು ಮಳೆ ಸುರಿಯಿತು.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿಯಿತು. ಅರಸೀಕೆರೆ, ಹೊಸಕೋಟೆ, ಕಣಬಘಟ್ಟ, ಅಣಜಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ. ಉಚ್ಚಂಗಿದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತುಂತುರು ಮಳೆಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.