
ಪ್ರಜಾವಾಣಿ ವಾರ್ತೆ
ಧಾರವಾಡದ ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಬೈಕ್‌ಗಳು
ಧಾರವಾಡ: ಬೈಕ್ ಕಳ್ಳರಿಬ್ಬರನ್ನು ಬಂಧಿಸಿ ಒಂಬತ್ತು ಬೈಕ್‌ಗಳನ್ನು (₹ 3.65 ಲಕ್ಷ ಮೌಲ್ಯ) ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿಯ ಹೂವಪ್ಪ (49) ಹಾಗೂ ಪುಂಡಲೀಕ (43) ಬಂಧಿತರು. ಉಪನಗರ ಠಾಣೆಯ ಪೊಲೀಸರು ಕಾರ್ಯಚರಣೆ ನಡೆಸಿ ಕಳ್ಳರನ್ನು ಹಿಡಿದಿದ್ದಾರೆ. ಧಾರವಾಡ, ಹುಬ್ಬಳ್ಳಿ, ಹಾವೇರಿ, ಗೋವಾ ಸಹಿತ ವಿವಿಧೆಡೆ ಕದ್ದಿದ್ದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
‘ಬೈಕ್‌ಗಳನ್ನು ಕದ್ದು ಮಾರಾಟ ಮಾಡುವ ದಂಧೆಯಲ್ಲಿ ತೊಡಗಿದ್ದರು. ರಸ್ತೆ ಬದಿ ನಿಂತಿದ್ದ ಬೈಕ್ ಕದಿಯುವ ಚಾಲಾಕಿತನ ರೂಢಿಸಿಕೊಂಡಿದ್ದರು. ನಗರದ ಜರ್ಮನ್ ಆಸ್ಪತ್ರೆ ವೃತ್ತದಲ್ಲಿ ಸಾಗುವಾಗ ಸಿಕ್ಕಿಬಿದ್ದರು’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.