ADVERTISEMENT

ಧಾರವಾಡ| ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ: ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 7:43 IST
Last Updated 9 ಜನವರಿ 2026, 7:43 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯವರು ಗುರುವಾರ ಪ್ರತಿಭಟನೆ ನಡೆಸಿದರು
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯವರು ಗುರುವಾರ ಪ್ರತಿಭಟನೆ ನಡೆಸಿದರು   

ಧಾರವಾಡ: ಹುಬ್ಬಳ್ಳಿಯಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ವಶಕ್ಕೆ ಪಡೆಯುವಾಗ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದವರು ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆ ಮೇಲೆ ಪೋಲಿಸರು ದರ್ಪ ತೋರಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ‘ಈ ಪ್ರಕರಣ ಅಕ್ಷಮ್ಯ. ಘಟನೆಗೆ ಕಾರಣರಾದ ಪೊಲೀಸರನ್ನು ಅಮಾನತು ಮಾಡಬೇಕು. ಅನ್ಯಾಯಕ್ಕೊಳಗಾದ ಮಹಿಳೆಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

ಪಾಲಿಕೆ ಸದಸ್ಯರಾದ ವಿಜಯಾನಂದ ಶೆಟ್ಟಿ, ಸುರೇಶ ಬೇದ್ರೆ, ಶಂಕರ ಶೇಳಕೆ, ಯಲ್ಲಮ್ಮ ಅರವಾಳದ, ಸುನೀತಾ ಮಾಳವದಕರ, ಸವಿತಾ ಅಮರಶೆಟ್ಟಿ, ರಾಜೇಶ್ವರಿ ಸಾಲಗಟ್ಟಿ, ಮಂಜುಳಾ ಅಕ್ಕೂರ, ಶೋಭಾ ಭುಜಂಗನವರ, ಪುಷ್ಪಾ ಮಜ್ಜಗಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.