ADVERTISEMENT

ಧಾರವಾಡ | ಸುತ್ತೂರು ಸಮೀಪ ರಸ್ತೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 7:18 IST
Last Updated 29 ಆಗಸ್ಟ್ 2025, 7:18 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಧಾರವಾಡ: ಸುತ್ತೂರು ಸಮೀಪ ಬೈಕ್‌ಗೆ ಬಿಆರ್‌ಟಿಎಸ್ ಚಿಗರಿ ಬಸ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಶ್ರೀಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ.

ಇಟ್ಟಿಗಟ್ಟಿ ಗ್ರಾಮದವರಾದ ಶ್ರೀಕಾಂತ್, ಮಾರ್ಗ ಬದಲಾವಣೆ ಸಲುವಾಗಿ ವಿಭಜಕದ ಬಳಿ ಬೈಕ್‌ ನಿಲ್ಲಿಸಿಕೊಂಡು ಕಾಯುತ್ತಿದ್ದರು. ಈ ವೇಳೆ, ಬಸ್‌ ಡಿಕ್ಕಿಯಾಗಿದೆ.

ಬಿಆರ್‌ಟಿಎಸ್ ಚಿಗರಿ ಬಸ್‌ಗಳು ಪದೇ ಪದೇ ಅಪಘಾತಕ್ಕೀಡಾಗುತ್ತಿರುವುದನ್ನು ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.