ಅಪಘಾತ, –ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ
ಹುಬ್ಬಳ್ಳಿ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಬಸ್ ಚಾಲಕ ಹಾಗೂ ಕ್ಲೀನರ್ ಅವರನ್ನು ಚಿಕಿತ್ಸೆಗಾಗಿ ಇಲ್ಲಿನ ಕೆಎಂಸಿ–ಆರ್‌ಐ ಆಸ್ಪತ್ರೆಗೆ ಗುರುವಾರ ದಾಖಲಿಸಲಾಗಿದೆ.
ಚಾಲಕ ಮೊಹಮ್ಮದ್ ರಫೀಕ್ ಹುಲಗೂರ (35) ತೀವ್ರವಾಗಿ ಗಾಯಗೊಂಡಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯ ಬಿಡ್ನಾಳದ ನಿವಾಸಿ, ಕ್ಲೀನರ್ ಮೊಹಮ್ಮದ್ ಸಾಧಿಕ್ ಧಾರವಾಡ (19) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
‘ಅಪಘಾತದಲ್ಲಿ ಮೊಹಮ್ಮದ್ ರಫೀಕ್ ಕಾಲಿಗೆ ಬಲವಾದ ಪೆಟ್ಟು ಬಿದ್ದಿದ್ದು, ಬಹು ಅಂಗಾಂಗಳಿಗೆ ತೀವ್ರ ಗಾಯಗಳಾಗಿವೆ. ಇದರಿಂದ ಎದೆನೋವು, ಉಸಿರಾಟ ತೊಂದರೆ ಅನುಭವಿಸುತ್ತಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಕೆಎಂಸಿಆರ್‌ಐ ವೈದ್ಯಕೀಯ ಅಧೀಕ್ಷಕ ಡಾ.ಈಶ್ವರ ಹಸಬಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.