ADVERTISEMENT

ಧಾರವಾಡ ಜಿಲ್ಲೆಯಾದ್ಯಂತ ಮಳೆ: ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ

​ಪ್ರಜಾವಾಣಿ ವಾರ್ತೆ
Published 20 ಮೇ 2022, 3:48 IST
Last Updated 20 ಮೇ 2022, 3:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ:ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಮೇ 20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿರುವ ಕಾರಣ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ .ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.