ADVERTISEMENT

ವಿಶ್ವವಿಖ್ಯಾತ ದಸರಾ ಮಹೋತ್ಸವ: ಧಾರವಾಡ ಜಿಲ್ಲೆ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2023, 16:03 IST
Last Updated 31 ಅಕ್ಟೋಬರ್ 2023, 16:03 IST
ಮೈಸೂರು ದಸರಾ ಮೆರವಣಿಗೆಯಲ್ಲಿ ಧಾರವಾಡದ ಸ್ತಬ್ಧಚಿತ್ರ
ಮೈಸೂರು ದಸರಾ ಮೆರವಣಿಗೆಯಲ್ಲಿ ಧಾರವಾಡದ ಸ್ತಬ್ಧಚಿತ್ರ   

ಧಾರವಾಡ: ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿಯ ‘ಧಾರವಾಡಿ ತಳಿ ಎಮ್ಮೆ, ನಮ್ಮ ಹೆಮ್ಮೆ’ ಟ್ಯಾಗ್‍ಲೈನ್‌ನ ಧಾರವಾಡ ಪೇಡಾ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಪಡೆದಿದೆ.

ವಿವಿಧ ಜಿಲ್ಲೆಗಳ 31 ಹಾಗೂ ವಿವಿಧ ಇಲಾಖೆಗಳ 18 ಸಹಿತ ಒಟ್ಟು 49 ಸ್ತಬ್ಧಚಿತ್ರಗಳು ಭಾಗವಹಿಸಿದ್ದವು.

ಧಾರವಾಡ ಪೇಡಾ ಸ್ತಬ್ಧಚಿತ್ರವನ್ನು ₹7.80 ಲಕ್ಷ ಅನುದಾನ ನಿರ್ಮಿಸಲಾಗಿತ್ತು. ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿಯ ಕಲಾವಿದ ಶಶಿಧರ ಗರಗ ಅವರು ಕುಸರಿಯಲ್ಲಿ ಈ ಸ್ತಬ್ಧಚಿತ್ರ ಅರಳಿತ್ತು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪಾ ಟಿ.ಕೆ. ಅವರು ಪರಿಕಲ್ಪನೆ, ವಿಷಯ ವಸ್ತು ನೀಡಿದ್ದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಗ್ರಾಮೀಣ ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಎ.ಎ. ತಹಶೀಲ್ದಾರ ಮತ್ತು ಹುಬ್ಬಳ್ಳಿಯ ಕೈಗಾರಿಕಾ ವಿಸ್ತರಣಾ ಅಧಿಕಾರಿ ಶಿವಾನಂದ ಕಮ್ಮಾರ ಮಾರ್ಗದರ್ಶನ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.