ADVERTISEMENT

ಧಾರವಾಡ ಜಿಲ್ಲೆಯಲ್ಲಿ ವಾರದಲ್ಲಿ ಎರಡು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 23 ಮೇ 2021, 15:44 IST
Last Updated 23 ಮೇ 2021, 15:44 IST
ಹುಬ್ಬಳ್ಳಿಯಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು.
ಹುಬ್ಬಳ್ಳಿಯಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು.   

ಹುಬ್ಬಳ್ಳಿ:ಅವಳಿ ನಗರದಲ್ಲಿ ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಕಠಿಣ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ, ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿದೆ.

ಉಳಿದಂತೆ ಜೂನ್‌ 7ರ ತನಕ ವಾರದಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ವಿಸ್ತರಿಸಲು ತೀರ್ಮಾನಿಸಿದೆ.

ಹೀಗಾಗಿಜೂನ್‌ 7ರ ವರೆಗೆ ಪ್ರತಿ ಗುರುವಾರ ಹಾಗೂ ಶುಕ್ರವಾರ ಮಾತ್ರ ಬೆಳಿಗ್ಗೆ 6ರಿಂದ 10 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ADVERTISEMENT

ಈ ಕುರಿತು ಚರ್ಚಿಸಲು ಭಾನುವಾರ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯ ಬಳಿಕ ಮಾತನಾಡಿದ ಶೆಟ್ಟರ್‌ ‘ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ತಜ್ಞರ ಅಭಿಪ್ರಾಯದಂತೆ ಜೂನ್‌ 7ರ ತನಕ ಸಂಪೂರ್ಣ ಲಾಕ್‌ಡೌನ್‌ ವಿಸ್ತರಿಸಲಾಗಿದೆ. ಅ ಅವಧಿಯಲ್ಲಿ ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ಬೆಳಿಗ್ಗೆ 8 ಗಂಟೆ ತನಕ ಮಾತ್ರ ಅವಕಾಶ ಕೊಡಲಾಗಿದೆ. ಸೋಂಕಿನ ಸರಪಳಿ ತುಂಡರಿಸಲು ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದ್ದು, ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಹಕರಿಸಬೇಕು’ ಎಂದು ಕೋರಿದರು.

ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ಲಾಬೂರಾಮ್‌, ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಹುಬ್ಬಳ್ಳಿ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.