ಧಾರವಾಡ: ‘ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ (ಡೊಳ್ಳು ಕುಣಿತ...) ಪ್ರಸ್ತುತಿಗೆ ಗಮನಹರಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದರು.
ದುರ್ಗಾದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಚೌತಿ ಹಾಗೂ ಈದ-ಮಿಲಾದ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
‘ಡಿ.ಜೆ ಶಬ್ಧವು ವೃದ್ದರು, ರೋಗಿಗಳಿಗೆ ಕಿರಿಕಿರಿ ಉಂಟುಮಾಡುತ್ತದೆ. ಡಿ.ಜೆ ಸೌಂಡ್ ಸಿಸ್ಟಂ ಬಳಕೆಯನ್ನು ಕೋರ್ಟ್ ನಿಷೇಧಿಸಿದೆ’ ಎಂದರು.
‘ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳ ಹಾಗೂ ಮೆರವಣಿಗೆಯ ಮಾರ್ಗವನ್ನು ಪೊಲೀಸ್ ಠಾಣೆಗೆ ತಿಳಿಸಬೇಕು ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ನಿಗಾ ವಹಿಸಬೇಕು’ ಎಂದರು.
ತಹಶೀಲ್ದಾರ್ ಡಾ.ಡಿ.ಎಚ್.ಹೂಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.