ಅಣ್ಣಿಗೇರಿ: ಸಮೀಪದ ನವಲಗುಂದ ರೈಲ್ವೆ ಗೇಟ್ ಹತ್ತಿರ ಬುಧವಾರ ಸಂಜೆ ನವಲಗುಂದ ಡಿಪೊದ ಸಾರಿಗೆ ಸಂಸ್ಥೆಯ ಬಸ್‌ಗೆ ಬೆಂಕಿ ತಗುಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬಸ್ ನವಲಗುಂದದಿಂದ ಗದಗಕ್ಕೆ ಹೋಗುತ್ತಿತ್ತು. ಬಸ್‌ನಲ್ಲಿ 25 ಪ್ರಯಾಣಿಕರು ಇದ್ದರು. ಈ ಕುರಿತು ಅಣ್ಣಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.