
ಪ್ರಜಾವಾಣಿ ವಾರ್ತೆ
ಧಾರವಾಡ: ಜನ್ನತ್ ನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಇಸ್ಮಾಯಿಲ್ ಹೊರಕೇರಿ, ಝರಿನಾ, ಅಮೀನಾ, ವೈರುಣ್, ಮುಸ್ತಾಕ್ ಕೈಪ್ ಹಾಗೂ ಅನಾಯಾ ಗಾಯಗೊಂಡವರು.
'ಅಮೀನಾ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ' ಎಂದು ಜಿಲ್ಲಾ ಶಸ್ತಚಿಕಿತ್ಸಕ ಸಂಗಪ್ಪ ಗಾಬಿ ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.