ಡಿ.ಎಂ.ಕಾಲವಾಡ
– ಎ.ಐ ಬಳಸಿ ವರ್ಧಿಸಿದ ಚಿತ್ರ
ಧಾರವಾಡ: ಕುಂದಗೋಳ ತಾಲ್ಲೂಕಿನ ಗುಡೇನಕಟ್ಟಿ ಪಿಡಿಒ ಅಧಿಕಾರಿ ಡಿ.ಎಂ.ಕಾಲವಾಡ ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ಧಾರೆ. ಗುಡೇನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಿ ನಾರಾಯಣಪುರದ ಕೆರೆಯಲ್ಲಿ ಅವಳಿ ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಅಮಾನತುಗೊಳಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮೃತ ಮಕ್ಕಳ ಮನೆಗೆ ಭೇಟಿ ನೀಡಿದ್ದರು. ಪಿಡಿಒ ಅಮಾನತಿಗೆ ಜಿಲ್ಲಾ ಪಂಚಾಯಿತಿ ಸಿಇಒಗೆ ಸೂಚನೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.