
ಪ್ರಜಾವಾಣಿ ವಾರ್ತೆ
ಧಾರವಾಡ: ತಾಲ್ಲೂಕಿನ ಗುಳೇದಕೊಪ್ಪದಲ್ಲಿ ಈಶ್ವರ ದೇವರ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಸೋಮವಾರ ವಿಜೃಂಭಣೆಯಿಂದ ನೆರವೇರಿತು.
ಅಭಿನವ ಸಿದ್ದಲಿಂಗ ಸ್ವಾಮೀಜಿ ಅವರು ರಥಕ್ಕೆ ಪುಷ್ಪಾರ್ಚನೆ ಮಾಡಿದರು. ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಭಕ್ತರು ರಥಕ್ಕೆ ಬಾಳೆಹಣ್ಣು ತೂರಿದರು. ರಥವನ್ನು ಎಳೆದರು. ಉತ್ಸವ ಮೂರ್ತಿಗೆ ನಮಿಸಿ ಭಕ್ತಿ ಸಮರ್ಪಿಸಿದರು.
ಬೆಳಿಗ್ಗೆಯಿಂದಲದೇ ದೇವರಿಗೆ ವಿಶೇಷ ಪೂಜೆ, ಕೈಂಕರ್ಯಗಳನ್ನು ನೆರವೇರಿಸಲಾಯಿತು. ಸುತ್ತಲಿನ ಗ್ರಾಮಗಳ ಜನರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.