ಧಾರವಾಡ: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಬಿರುಸಾಗಿ ಮಳೆ ಸುರಿಯಿತು. ಗುಡುಗು, ಮಿಂಚಿನ ಆರ್ಭಟ ಇತ್ತು.
ರೈಲು ನಿಲ್ದಾಣ ಮಾರ್ಗದ ರಸ್ತೆ, ಕೆಎಂಎಫ್ ಮತ್ತು ಎನ್‌ಟಿಟಿಎಫ್ ಮುಂಭಾಗ ರಸ್ತೆ ವಿವಿಧೆಡೆ ರಸ್ತೆಗಳಲ್ಲಿ ನೀರು ಆವರಿಸಿತ್ತು. ಕೆಲವೆಡೆ ಚರಂಡಿ ನೀರು ರಸ್ತೆಗೆ ಹೊರಳಿತ್ತು. ವಾಹನ ಸಂಚಾರಕ್ಕೆ ತೊಡಕಾಗಿತ್ತು. ಕಲಘಟಗಿ, ಕುಂದಗೋಳ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.