ADVERTISEMENT

ಧಾರವಾಡ | ‘ಅಕ್ಸಾ’ ಅಧ್ಯಕ್ಷ ಕಾಂತಕುಮಾರ್‌ ವಿರುದ್ಧ ಪ್ರಕರಣ ದಾಖಲು: ಶಶಿಕುಮಾರ್‌

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 19:19 IST
Last Updated 26 ಫೆಬ್ರುವರಿ 2026, 19:19 IST
<div class="paragraphs"><p>ಕಾಂತಕುಮಾರ್‌</p></div>

ಕಾಂತಕುಮಾರ್‌

   

ಧಾರವಾಡ: ‘ನಗರದಲ್ಲಿ ಫೆ.24ರಂದು ನಡೆದ ಉದ್ಯೋಗಾಕಾಂಕ್ಷಿಗಳ ಬೃಹತ್‌ ಪ್ರತಿಭಟನೆಯಲ್ಲಿ ನಿಯಮ ಉಲ್ಲಂಘನೆ ಆರೋಪದ ಮೇಲೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಅಧ್ಯಕ್ಷ ಕಾಂತಕುಮಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ತಿಳಿಸಿದರು.

‘ಸರ್ವಮಂಗಳ ವೃತ್ತ (ಲಿಂಗಾಯತ ಭವನ ಬಳಿ) ಮತ್ತು ಜುಬಿಲಿ ವೃತ್ತದಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಪೊಲೀಸರ ಜತೆ ಸಂಘರ್ಷ, ಕರ್ತವ್ಯಕ್ಕೆ ಅಡ್ಡಿ, ಪ್ರತಿಭಟನಾ ರ‍್ಯಾಲಿ, ಮಾರ್ಗ ಬದಲಾವಣೆ, ರಸ್ತೆ ತಡೆ ಇತ್ಯಾದಿ ಚಟುವಟಿಕೆ ನಡೆದಿವೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಫೆ. 24ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ಸಂಘಟನೆಗೆ ಪೊಲೀಸ್‌ ಇಲಾಖೆ ಅನುಮತಿ ನೀಡಿರಲಿಲ್ಲ. ಪ್ರತಿಭಟನೆಗೆ ಬಿಜೆಪಿಗೆ ಅನುಮತಿ ಪಡೆದಿತ್ತು. 5 ಡ್ರೋನ್‌ ಕ್ಯಾಮೆರಾ, 20 ವಿಡಿಯೊ ಕ್ಯಾಮೆರಾ, ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ಚಿತ್ರಾವಳಿಗಳನ್ನು ತಾಂತ್ರಿಕ ತಂಡ ಪರಿಶೀಲಿಸುತ್ತಿದೆ. ವಿವರಗಳನ್ನು ಕಲೆ ಹಾಕಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.