ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಜುಲೈ 8 ಮತ್ತು 9 ರಂದು ಜಿಲ್ಲೆಗೆ ಭೇಟಿ ನೀಡುವರು. 8 ರಂದು ಬೆಳಿಗ್ಗೆ 10.30ಕ್ಕೆ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಬಯಲಾಟ ಪ್ರದರ್ಶನದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸುವರು. 9 ರಂದು ಬೆಳಿಗ್ಗೆ 9.30ಕ್ಕೆ ಅತಿಥಿ ಗೃಹದಲ್ಲಿ ಜಿಲ್ಲಾ ಕನ್ನಡ ಸಂಘಟನೆ ಹಾಗೂ ಹೋರಾಟಗಾರರೊಂದಿಗೆ ಸಭೆ. 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.