ಧಾರವಾಡ: ‘ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಬೇಕು. ಈ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ.ಎಫ್. ದೊಡ್ಡಮನಿ ಹೇಳಿದರು.
ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಪ್ಯಾನ್ ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನ ಅಂಗವಾಗಿ ಸಪ್ತಾಪೂರ ವಿವೇಕಾನಂದ ವೃತ್ತದಲ್ಲಿ ಈಚೆಗೆ ಆಯೋಜಿಸಿದ್ದ ಬಾಲ ಕಾರ್ಮಿಕ ಮತ್ತು ಕಿಶೋರ್ ಕಾರ್ಮಿಕ ಕಾಯ್ದೆ ಜಾಗೃತಿ ಜಾಥಾಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ವಿ.ಬರಮನಿ ಮಾತನಾಡಿದರು. ಕಾರ್ಮಿಕ ಅಧಿಕಾರಿಗಳಾದ ಅಕ್ಬರ್ ಮುಲ್ಲಾ, ಮಾರಿಕಾಂಬ ಹುಲಕೋಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಬಸವರಾಜ್ ಸಿ.ಪಿ, ಕಾರ್ಮಿಕ ನಿರೀಕ್ಷಕರಾದ ಭುವನೇಶ್ವರಿ ಕೋಟಿಮಠ, ಮೀನಾಕ್ಷಿ ಶಿಂದಿಹಟ್ಟಿ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶೋಭಾ ಕುಸುಗಲ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕೆ.ವಿ.ಕೌಜಲಗಿ ಇದ್ದರು.
Cut-off box - ಸಮಸ್ಯೆ ಪರಿಹರಿಸಲು ಸೂಚನೆ ಧಾರವಾಡ: ಅಹವಾಲುಗಳನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ಸಮಸ್ಯೆ ಇತ್ಯರ್ಥಪಡಿಸಿ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ ಸೂಚನೆ ನೀಡಿದರು. ಮರೇವಾಡದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು. ನೀರು ಪೂರೈಕೆ ಬೀದಿದೀಪ ವ್ಯವಸ್ಥಿತ ನಿರ್ವಹಣೆ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಕರ ವಸೂಲಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು. ಮರೇವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 30 ಕ್ಕೂ ಹೆಚ್ಚು ಅಹವಾಲುಗಳನ್ನು ಸಲ್ಲಿಸಿದರು. ನರೇಗಾ ಯೋಜನೆಯಲ್ ಕಾಮಗಾರಿ ನಿರ್ವಹಿಸಿರುವ ಶಾಲಾ ಮೈದಾನ ಶಾಲಾ ಶೌಚಾಲಯ ಶಾಲಾ ಭೋಜನಾಲಯ ಕಟ್ಟಡ ಕೂಸಿನ ಮನೆ ಕಟ್ಟಡವನ್ನು ಸಿಇಒ ಭುವನೇಶ ಪಾಟೀಲ ಪರಿಶೀಲಿಸಿದರು. ಉಪಕಾರ್ಯದರ್ಶಿ ಬಿ.ಎಸ್ ಮೂಗನೂರಮಠ ತಾಲೂಕ ಪಂಚಾಯಿತಿ ಗಂಗಾಧರ ಕಂದಕೂರ ಮರೇವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಪ್ಪ ಮ. ಪೂಜಾರ ಉಪಾಧ್ಯಕ್ಷೆ ನೀಲವ್ವ ಮೈ. ವಗ್ಗರ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರು ಪೂಜಾರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.