ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಮಾಜದಲ್ಲಿ ಸಮಾನತೆ ತರಲು ಸಾಕಷ್ಟು ಕ್ರಮವಹಿಸಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹೇಳಿರುವುದು ಹಾಸ್ಯಾಸ್ಪದವಾಗಿದೆ’ ಎಂದು ಸಮತಾ ಸೈನಿಕ ದಳ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಶಂಕರ ಅಜಮನಿ ಟೀಕಿಸಿದ್ದಾರೆ.
‘ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸದೆ ಮೋಸ ಮಾಡಿದೆ. ಬಿಜೆಪಿ ಮತ್ತು ಸಂಘ ಪರಿವಾರವು ದಲಿತ ಸಮುದಾಯದ ಬಗ್ಗೆ ಹುಸಿ ಪ್ರೀತಿ ತೋರಿಸುತ್ತದೆ. ಬಿಜೆಪಿಗರ ಅಂತರಂಗ ಮೀಸಲಾತಿಗೆ ವಿರುದ್ಧವಾಗಿದೆ’ ಎಂದು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.