ADVERTISEMENT

LS POLLS | ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಆಗಿದೆ: ಯತ್ನಾಳ ಆರೋಪ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 9:54 IST
Last Updated 20 ಏಪ್ರಿಲ್ 2024, 9:54 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಹುಬ್ಬಳ್ಳಿ: 'ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಅದಕ್ಕೆ ಸ್ಪರ್ಧಿಸಿದ್ದಾರೆ' ಎಂದು ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ಆರೋಪಿಸಿದರು.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಯಾರು ಪೇಮೆಂಟ್ ಮಾಡಿದ್ದಾರೆ ಎನ್ನುವುದನ್ನು ಮೇ 7ರ ನಂತರ ಹೇಳುವೆ' ಎಂದು ತಿಳಿಸಿದರು.

ADVERTISEMENT

'ಮೊದಲು ಶಾಸಕ ವಿನಯ ಕುಲಕರ್ಣಿ ಅವರು ಸ್ವಾಮೀಜಿ ಅವರನ್ನು ಬೇಕಾಬಿಟ್ಟಿ ಬಯ್ಯುತ್ತಿದ್ದರು. ಈಗ ಹೊಗಳುತ್ತಿದ್ದಾರೆ ಎಂದರೆ ಪೇಮೆಂಟ್ ಆಗಿದೆ‘ ಎಂದೇ ಅರ್ಥ ಎಂದು ವ್ಯಂಗ್ಯವಾಡಿದರು.

ರಾಜ್ಯಪಾಲರು ಎಚ್ಚರಿಕೆ ನೀಡಲಿ: ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಜ್ಯದಲ್ಲಿ ನಿರಂತರವಾಗಿ ಹಲ್ಲೆ, ಕೊಲೆಗಳು ನಡೆದಿವೆ. ಈ ಪರಿಸ್ಥಿತಿ ಬಗ್ಗೆ ರಾಷ್ಟ್ರಪತಿ ಅವರಿಗೆ ವರದಿ ನೀಡಬೇಕು. ಜೊತೆಗೆ ಇಲ್ಲಿನ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಹಿಂದೂ‌ಗಳಿಗೆ ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.