
ಪ್ರಜಾವಾಣಿ ವಾರ್ತೆ
ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ’ಭಾರತೀಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ (ಐಆರ್‌ಇಡಿಎ) ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ 30ರಷ್ಟು ನಿವ್ವಳ ಲಾಭ ಗಳಿಸಿದೆ‘ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
‘ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಇರುವ ಐಆರ್‌ಇಡಿಎ ಸಂಸ್ಥೆಯು ತನ್ನ ಒಟ್ಟು ಆದಾಯದಲ್ಲಿ ಶೇ 32ರಷ್ಟು ಏರಿಕೆ ಕಂಡಿದೆ. 2024ನೇ ಮೊದಲ ತ್ರೈಮಾಸಿಕದಲ್ಲಿ ₹ 1510.70 ಕೋಟಿ ತಲುಪಿದೆ ಎಂದು ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.