ADVERTISEMENT

ಗಲಾಟೆ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 0:33 IST
Last Updated 1 ಅಕ್ಟೋಬರ್ 2025, 0:33 IST
ವಿದ್ಯಾನಂದ ಸುಬೇದಾರ್
ವಿದ್ಯಾನಂದ ಸುಬೇದಾರ್   

ಧಾರವಾಡ: ನಗರದ ಸಪ್ತಾಪುರಬಾವಿಯ ಸೈನಿಕ ಮೆಸ್‌ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಉಪನಗರ ಠಾಣೆಯ ಎಎಸ್‌ಐ ವಿದ್ಯಾನಂದ ಸುಬೇದಾರ್ ಮತ್ತು ಕಾನ್‌ಸ್ಟೆಬಲ್ ರಾಚಪ್ಪ ಕಣಬೂರು ಅವರನ್ನು ಅಮಾನತುಗೊಳಿಸಲಾಗಿದೆ.

‘ವಿಡಿಯೋ ಪರಿಶೀಲಿಸಿದಾಗ ಇಬ್ಬರು ಪೊಲೀಸ್‌ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದು ಕಂಡು ಬಂದಿದೆ. ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ’ ಎಂದು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಸೈನಿಕ ಮೆಸ್‌ನಲ್ಲಿ ಸೆ. 28 ರಂದು ರಾತ್ರಿ ಮೆಸ್‌ ಮಾಲೀಕ, ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಅವರ ಮೇಲೆ ಇಬ್ಬರು ಪೊಲೀಸ್‌ ಸಿಬ್ಬಂದಿ ಹಲ್ಲೆ ನಡೆಸಿ ಗಾಯಗೊಳಿಸಿರುವುದಾಗಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್‌ ಸಿಬ್ಬಂದಿ ಪ್ರತಿ ದೂರು ದಾಖಲಿಸಿದ್ದರು.

ADVERTISEMENT
ರಾಚಪ್ಪ ಕಣಬೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.