ADVERTISEMENT

ಪತ್ನಿ ಕೊಂದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ,ಜೈಲಿನಲ್ಲಿಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 5:41 IST
Last Updated 15 ಜನವರಿ 2026, 5:41 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ಧಾರವಾಡ: ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಈಶ್ವರಪ್ಪ ಪೂಜಾರ (46) ಮಂಗಳವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಕೈದಿ ಈಶ್ವರಪ್ಪ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪೂರ ಗ್ರಾಮದವರು. 2024ರ ಜೂನ್‌ 19ರಿಂದ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜೈಲಿನ ಕೈಮಗ್ಗ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಕೆಲ ದಿನಗಳಿಂದ ಖಿನ್ನತೆಗೊಂಡಿದ್ದರು ಎಂದು ಸಹಕೈದಿಗಳು ತಿಳಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.