
ಪ್ರಜಾವಾಣಿ ವಾರ್ತೆ
ಧಾರವಾಡ: ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕೇಂದ್ರ ಕಾರಾಗೃಹದಲ್ಲಿದ್ದ ಈಶ್ವರಪ್ಪ ಪೂಜಾರ (46) ಮಂಗಳವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಕೈದಿ ಈಶ್ವರಪ್ಪ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪೂರ ಗ್ರಾಮದವರು. 2024 ಜೂನ್ 19ರಿಂದ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಜೈಲಿನ ಕೈಮಗ್ಗ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಕೆಲದಿನಗಳಿಂದ ಆತ ಹತಾಶನಾಗಿದ್ದ ಎಂದು ಸಹಕೈದಿಗಳು ತಿಳಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು.
ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.