ADVERTISEMENT

ನೇಮಕಾತಿ ವಿಳಂಬ ಖಂಡಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಮತ್ತೆ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 5:35 IST
Last Updated 24 ಫೆಬ್ರುವರಿ 2026, 5:35 IST
<div class="paragraphs"><p>ನೇಮಕಾತಿ ವಿಳಂಬ ಖಂಡಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಮತ್ತೆ ಬೃಹತ್ ಪ್ರತಿಭಟನೆ</p></div>

ನೇಮಕಾತಿ ವಿಳಂಬ ಖಂಡಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಮತ್ತೆ ಬೃಹತ್ ಪ್ರತಿಭಟನೆ

   

ಧಾರವಾಡ: ಸರ್ಕಾರಿ ಹುದ್ದೆಗಳ ನೇಮಕಾತಿ ವಿಳಂಬ ಖಂಡಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಸಂಘಟನೆ ಮತ್ತು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿರುವ ನಿಮಿತ್ತ ಶ್ರೀನಗರ ವೃತ್ತ, ಸಪ್ತಾಪುರ ಭಾಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಹು-ಧಾ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಶ್ರೀನಗರ ವೃತ್ತ ಭಾಗದಲ್ಲಿ ಹೆಚ್ಚು ಪೋಲೀಸ್ ತಂಡಗಳನ್ನು ನಿಯೋಜಿಸಲಾಗಿದೆ.

ADVERTISEMENT

ಉದ್ಯೋಗಾಕಾಂಕ್ಷಿಗಳು ಜಮಾಯಿಸಿದ್ದಾರೆ.

ಪ್ರತಿಭಟನಾಕಾರರು ಜಯನಗರ ವೃತ್ತದಲ್ಲಿ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯ ಮಂತ್ರಿ ಸಿದ್ದರಾಮಯ್ಯ, ವಿವಿಧ ಸಚಿವರ ಭಾವಚಿತ್ರ ದಹಿಸಿದರು. ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್, ಅಶೋಕ, ಉಪ ನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ತಿನ ಸದಸ್ಯ ಎಸ್. ವಿ.ಸಂಕನೂರ, ಛಲವಾದಿ ನಾರಾಯಣಸ್ವಾಮಿ, ಅಕ್ಸಾ ಅಧ್ಯಕ್ಷ ಕಾಂತ ಕುಮಾರ್ ಪಾಲ್ಗೊಂಡಿದ್ದಾರೆ.

ಜಯನಗರ ವೃತ್ತದಲ್ಲಿ ಅಳವಡಿಸಿದ್ದ ಬಿಜೆಪಿ ಬ್ಯಾನರ್ ಗಳನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹರಿದು ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ನೀರಿನ ಖಾಲಿ ಬಾಟಲಿ, ಭಿತ್ತಿಫಲಕಗಳ ಕಾಗದದ ಚೂರುಗಳನ್ನು ತೂರಿದರು.

ಆರ್.ಅಶೋಕ್ ಅವರು ಭಾಷಣ ಮಾಡುವುದಕ್ಕೆ ಪ್ರತಿಭಟನಾಕಾರರು ಒಪ್ಪಲಿಲ್ಲ. ಬಿಜೆಪಿ ಮುಖಂಡರು ಪ್ರತಿಭಟನಾ ಸ್ಥಳದಿಂದ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.