ನವಲಗುಂದ: ಪಟ್ಟಣವೂ ಸೇರಿದಂತೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬುಧವಾರ ಗುಡುಗು, ಸಿಡಿಲು ಗಾಳಿ ಸಹಿತ ಭಾರಿ ಮಳೆಯಾಗಿದೆ. ಪಟ್ಟಣದಲ್ಲಿ ಗಾಳಿಯ ರಭಸಕ್ಕೆ ಅಲ್ಲಲ್ಲಿ ಮರಗಳು ಬಿದ್ದು ವಿದ್ಯುತ್ ವ್ಯಯವಾಗಿದ್ದು. ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಸ್ಥರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ ಶೆಡ್ಡುಗಳ ತಾಡಪತ್ರೆಗಳು ಗಾಳಿಯ ರಭಸಕ್ಕೆ ಹಾರಿಹೋಗಿವೆ.
ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ಯಾವುದೇ ಪ್ರಾಣ ಹಾನಿಯಾದ ಕುರಿತು ವರದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.