ಧಾರವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು ಶಾಲೆ, ಮನೆಗಳಿಗೆ ನೀರು ನುಗ್ಗಿದೆ. ಸಿಡಿಲು ಬಡಿದು ಬೆಂತುರ ರಸ್ತೆಯಲ್ಲಿ ಏಳು ಕುರಿಗಳು ಮೃತಪಟ್ಟಿವೆ, ಭದ್ರಾಪುರ ಗ್ರಾಮದಲ್ಲಿ ಐದು ಮನೆಗಳು ಕುಸಿದಿವೆ.
ಅಣ್ಣಿಗೇರಿ ಪಟ್ಟಣದ ಸುರಕೋಡ ಬಡಾವಣೆ, ರಾಜರಾಜೇಶ್ವರಿ ನಗರ, ಅಂಬೇಡ್ಕರ್ ನಗರದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ಆವರಿಸಿದೆ. ತಗ್ಗು ಪ್ರದೇಶದ ನೀರು ಹೊರಕ್ಕೆ ಹರಿಸುವ ಕಾರ್ಯಾಚರಣೆ ನಡೆಯುತ್ತಿದೆ. ಅಣ್ಣಿಗೇರಿ 5.9, ಹುಬ್ಬಳ್ಳಿ 1.6 ಹಾಗೂ ಕುಂದಗೋಳ 1 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.