ADVERTISEMENT

ಧಾರವಾಡ | ವಿವಿಧ ಗ್ರಾ. ಪಂ.ಉಪಚುನಾವಣೆ: ಮೇ 11ರಂದು ಮತದಾನ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 16:04 IST
Last Updated 16 ಏಪ್ರಿಲ್ 2025, 16:04 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

(ಸಾಂದರ್ಭಿಕ ಚಿತ್ರ)

ಧಾರವಾಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮೇ 11ರಂದು ಮತದಾನ ನಡೆಯಲಿದೆ.

ADVERTISEMENT

ಧಾರವಾಡ ತಾಲ್ಲೂಕಿನ ಉಪ್ಪಿನಬೆಟಗೇರಿ, ಶಿವಳ್ಳಿ, ಹುಬ್ಬಳ್ಳಿ ತಾಲ್ಲೂಕಿನ ಹಳ್ಯಾಳ, ಕಲಘಟಗಿ ತಾಲ್ಲೂಕಿನ ಕುರುವಿನಕೊಪ್ಪ, ಸೂರಶೆಟ್ಟಿಕೊಪ್ಪ, ನವಲಗುಂದ ತಾಲ್ಲೂಕಿನ ಶಿರಕೋಳ, ಯಮನೂರ ಹಾಗೂ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಸಹಿತ ಎಂಟು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಏ.28ರ ಕೊನೆ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ 29ರಂದು ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಮೇ 2 ‌ ಕಡೆ ದಿನ.

ಮೇ 11 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅವಶ್ಯವಿದ್ದರೆ, ಮೇ 13ರಂದು ನಡೆಸಲಾಗುವುದು. ಮೇ 14 ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ.

ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏ. 22ರಿಂದ ಮೇ 14 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.