ADVERTISEMENT

ಧಾರವಾಡ | ಅಕ್ಕ ಪಡೆ; ವಾಹನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2026, 2:40 IST
Last Updated 6 ಜನವರಿ 2026, 2:40 IST
ಧಾರವಾಡದ ಸೃಜನಾ ರಂಗಮಂದಿರದಲ್ಲಿ ಅಕ್ಕ ಪಡೆ ವಾಹನಕ್ಕೆ ಜಿಲ್ಲಾಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಚಾಲನೆ ನೀಡಿದರು
ಧಾರವಾಡದ ಸೃಜನಾ ರಂಗಮಂದಿರದಲ್ಲಿ ಅಕ್ಕ ಪಡೆ ವಾಹನಕ್ಕೆ ಜಿಲ್ಲಾಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಚಾಲನೆ ನೀಡಿದರು   

ಧಾರವಾಡ: ‘ಅಕ್ಕಪಡೆಯವರು ಗಸ್ತು ತಿರುಗುವ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಸೃಜನಾ ರಂಗಮಂದಿರ ಮುಂಭಾಗದಲ್ಲಿ ಸೋಮವಾರ ಅಕ್ಕ ಪಡೆ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಗೃಹ ರಕ್ಷಕರದವರನ್ನೊಳಗೊಂಡ ಅಕ್ಕ ಪಡೆಯನ್ನು ರಚಿಸಿದೆ. ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು ಅಕ್ಕ ಪಡೆಯ ಉದ್ದೇಶವಾಗಿದೆ’ ಎಂದರು.

ADVERTISEMENT

‘ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು, ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು ಅಕ್ಕ ಪಡೆಯ ಗುರಿಯಾಗಿದೆ’ ಎಂದರು.

ಅಕ್ಕ ಪಡೆ ಕಾರ್ಯ: ಅಕ್ಕ ಪಡೆ ತಂಡವು ನಿತ್ಯ ಎರಡು ಪಾಳಿಗಳಲ್ಲಿ, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆ ಮತ್ತು ಮಧ್ಯಾಹ್ನ 2 ರಿಂದ ರಾತ್ರಿ 8 ಗಂಟೆವರೆಗೆ ಕಾರ್ಯನಿರ್ವಹಿಸುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.