ADVERTISEMENT

ಧಾರವಾಡ: ಪೊಲೀಸ್ ತರಬೇತಿ ಶಾಲೆಯಲ್ಲಿ ಯುವಕ‌ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2018, 11:24 IST
Last Updated 21 ಡಿಸೆಂಬರ್ 2018, 11:24 IST

ಧಾರವಾಡ: ಇಲ್ಲಿನ ಪೊಲೀಸ್ ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿ ಮನೋಹರ ಕೋಟಾರಗಸ್ತಿ (24) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇಂದ್ರದ ಮರಕ್ಕೆ ನೇಣು ಹಾಕಿಕೊಂಡಿರುವ ಮನೋಹರ ಅವರು ವಿಜಯಪುರ ಸಿಂಧಗಿ ತಾಲ್ಲೂಕಿನ ಬೋರಗಿ ಗ್ರಾಮದವರು.

ಮನೋಹರ ಅವರು 23 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಆತ್ಮಹತ್ಯೆಗೆ ಪ್ರೀತಿಸಿದ ಹುಡುಗಿ ಮತ್ತು ತರಬೇತಿ ಶಾಲೆ ಪ್ರಾಂಶುಪಾಲ ಪರಾಶ್ವಟ್ಟಿ ಕಾರಣ ಎಂದಿದ್ದಾರೆ.

ADVERTISEMENT

ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಆಯುಕ್ತ ಎಮ್ ಎನ್ ನಾಗರಾಜ ಭೇಟಿ ನೀಡಿ ಮನೋಹರ ಸಹೋದರನಿಗೆ ಸಾಂತ್ವನ ಹೇಳಿದರು.

2018ನೆ ಬ್ಯಾಚ್ ನಲ್ಲಿ ತರಬೇತಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದ ಮನೋಹರ ಅವರ ವಿರುಧ್ಧ ಪ್ರೇಮ ಪ್ರಕರಣದಲ್ಲಿ ಅತ್ಯಾಚಾರದ ಪ್ರಕರಣ ದಾಖಲಾಗಿತ್ತು.

ಈ ವಿಚಾರದಲ್ಲಿ ಇತನ ಬಗ್ಗೆ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು

ಈ ವೇಳೆ ಧಾರವಾಡದ ಕಲಘಟಗಿಯ ರಸ್ತೆಯಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಕೊನೆಯ ತರಬೇತಿ ಪಡೆಯುತ್ತಿದ್ದ ಮನೋಹರ್ ಕೊಟರಗಸ್ತಿ ನಿನ್ನೆ ಮಧ್ಯರಾತ್ರಿ ತರಬೇತಿಯ ಆವರಣದಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಂಶುಪಾಲ ಪಾರಶೆಟ್ಟಿ ಕಿರುಕುಳ ನೀಡುತ್ತಿದ್ದಾರೆಂಬ ವಿಚಾರ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.