ADVERTISEMENT

ಸಂಪುಟ ವಿಸ್ತರಣೆ ನಂತರ ಅಸಮಾಧಾನ ಭುಗಿಲೇಳಲಿದೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2018, 8:52 IST
Last Updated 22 ಡಿಸೆಂಬರ್ 2018, 8:52 IST
ಯಡಿಯೂರಪ್ಪ
ಯಡಿಯೂರಪ್ಪ   

ಹುಬ್ಬಳ್ಳಿ:ಕಾಂಗ್ರೆಸ್‌ನಲ್ಲಿ ಅತೃಪ್ತಿ ತಾಂಡವಾಡುತ್ತಿತ್ತು. ಇದೀಗ ಸಂಪುಟ ವಿಸ್ತರಣೆಗೆ ಮುಂದಾಗಿರುವುದರಿಂದ ಅಸಮಾಧಾನ ಭುಗಿಲೇಳಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಮೇಶ ಜಾರಕಿಹೋಳಿ ಕೈಬಿಟ್ಟಿದ್ದರಿಂದ ಸಾಕಷ್ಟು ಪರಿಣಾಮ ಬೀರಲಿದೆ. ನಾವು 104 ಜನ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡುತ್ತಿದ್ದೇವೆ‌.

ಅಸಮಾಧಾನ ಭುಗಿಲೆದ್ದ ಮೇಲೆ ಬಿಜೆಪಿ ಶಾಸಕಾಂಗ ಸಭೆ ಕರೆಯುತ್ತೇನೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ’ ಎಂದರು.

ADVERTISEMENT

‘ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ದೋಷ ಎತ್ತಿ ತೋರಿಸಿದ್ದೇವೆ. ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ಕಬ್ಬು ಬೆಳೆಗಾರರು, ಉತ್ತರ ಕರ್ನಾಟಕದ‌ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಏನೂ ಮಾಡಿಲ್ಲ. ಬರಗಾಲದ ಬಗ್ಗೆ ವ್ಯಾಪಕ ಚರ್ಚೆ ಮಾಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬರಗಾಲ ಅಧ್ಯಯನ ಪ್ರವಾಸ ಮಾಡುತ್ತೇನೆ. ಸರ್ಕಾರ ಕೊಟ್ಟ ಅಂಕಿ ಅಂಶ ತಪ್ಪು ಎಂದು ಸಾಬೀತು ಮಾಡುತ್ತೇನೆ' ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.