ADVERTISEMENT

ರಾಷ್ಟ್ರಧ್ವಜಕ್ಕೆ ಅಪಮಾನ: ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷನ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2022, 6:11 IST
Last Updated 21 ಆಗಸ್ಟ್ 2022, 6:11 IST

ಕಲಘಟಗಿ: ತಾಲ್ಲೂಕಿನ ಮುಕ್ಕಲ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆಗೆ ಸಂಬಂಧಿಸಿದಂತೆ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ ಕುಂಬಾರ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ ಡಿಎಂಸಿ) ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ ವಿರುದ್ಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಕಂಬಾರ ಅವರು ಉಲ್ಟಾ ಕಟ್ಟಿದ್ದ ಭಾವುಟದ ಧ್ವಜಾರೋಹಣವನ್ನು ನಡುವಿನಮನಿ ನೆರವೇರಿಸಿದ್ದರು‌. ಘಟನೆ ಕುರಿತು ಗ್ರಾಮದ ಪರಶುರಾಮ ದುಂಡಿ ದೂರು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT