
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ‘ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಹಿರಂಗ ಹೇಳಿಕೆ ನೀಡಲಿ. ನಿರಾಕರಿಸಿದ್ದೇ ಆದರೆ, ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ ಎಂದೇ ಅರ್ಥ’ ಎಂದು ಸಂಸದ ಜಗದೀಶ ಶೆಟ್ಟರ್ ವಿಶ್ಲೇಷಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಅವರ ಹಿಂಬಾಲಕರು ಹೇಳುತ್ತಿದ್ದಾರೆ. ನವೆಂಬರ್ ಅಂತ್ಯದೊಳಗೆ ರಾಜಕೀಯ ಬದಲಾವಣೆಯಂತೂ ಆಗುತ್ತದೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿದರೆ ಸರ್ಕಾರ ಐದು ವರ್ಷ ಇರುತ್ತದೆ. ಇಲ್ಲದಿದ್ದರೆ ಯಾವ ಕ್ಷಣದಲ್ಲಾದರೂ ಪತನವಾಗಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.