ADVERTISEMENT

ವೇತನ ಹೆಚ್ಚಳಕ್ಕೆ ಆಗ್ರಹಿಸಿ ವೈದ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 15:58 IST
Last Updated 21 ಸೆಪ್ಟೆಂಬರ್ 2020, 15:58 IST
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕಿಮ್ಸ್‌ ವೈದ್ಯರು ಸೋಮವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿದರು
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕಿಮ್ಸ್‌ ವೈದ್ಯರು ಸೋಮವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿದರು   

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆಯ (ಕಿಮ್ಸ್) ಸಿಬ್ಬಂದಿಗೆ 7ನೇ ವೇತನ ಆಯೋಗದ ಎಐಸಿಟಿಇ ಶಿಫಾರಸ್ಸಿನನ್ವಯ ವೇತನ ನೀಡಬೇಕು ಎಂದು ಆಗ್ರಹಿಸಿ ವೈದ್ಯರು ಕೈಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಿದರು.

ರಾಜ್ಯದ ಎಲ್ಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಏಪ್ರಿಲ್‌ ತಿಂಗಳಿನಿಂದನೇ ಹೊಸ ವೇತನ ನೀಡಲಾಗುತ್ತಿದೆ. ಆದರೆ, ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಜಾರಿಗೊಳಿಸಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ ಮನವಿಯಲ್ಲಿ ದೂರಿದ್ದಾರೆ.

ಕೋವಿಡ್‌–19 ಇರುವ ಸಂದರ್ಭದಲ್ಲಿಯೂ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದೇವೆ. ಕೂಡಲೇ ಹೆಚ್ಚಳಕ್ಕೆ ಕ್ರಮಕೈಗೊಳ್ಳಬೇಕು. ಸೆ.27ರವರೆಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಲಾಗುವುದು. ಸೆ.28 ರಿಂದ ತುರ್ತುಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ADVERTISEMENT

ಅಧ್ಯಕ್ಷ ಡಾ.ಎಸ್‌.ಎಸ್‌. ಶಿರೋಳ, ಕಾರ್ಯದರ್ಶಿ ಡಾ.ಅರುಣ ವಾಳ್ವೇಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.