ADVERTISEMENT

ಹುಬ್ಬಳ್ಳಿ: ಗಮನ ಸೆಳೆದ ಶ್ವಾನ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 15:56 IST
Last Updated 18 ಫೆಬ್ರುವರಿ 2024, 15:56 IST
ಹುಬ್ಬಳ್ಳಿಯ ಇಂದಿರಾ ಗಾಜಿನಮನೆ ಆವರಣದಲ್ಲಿ ಭಾನುವಾರ ನಡೆದ ಪ್ರಾಣಿಗಳ ಅರಿವು ಮೂಡಿಸುವ ಶಿಬಿರ ಹಾಗೂ ಜಿಲ್ಲಾಮಟ್ಟದ ಶ್ವಾನ ಪ್ರದರ್ಶನದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶ್ವಾನವನ್ನು ವೀಕ್ಷಿಸಿದರು
ಹುಬ್ಬಳ್ಳಿಯ ಇಂದಿರಾ ಗಾಜಿನಮನೆ ಆವರಣದಲ್ಲಿ ಭಾನುವಾರ ನಡೆದ ಪ್ರಾಣಿಗಳ ಅರಿವು ಮೂಡಿಸುವ ಶಿಬಿರ ಹಾಗೂ ಜಿಲ್ಲಾಮಟ್ಟದ ಶ್ವಾನ ಪ್ರದರ್ಶನದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶ್ವಾನವನ್ನು ವೀಕ್ಷಿಸಿದರು   

ಹುಬ್ಬಳ್ಳಿ: ನಗರದ ಇಂದಿರಾ ಗಾಜಿನಮನೆ ಆವರಣದಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಪ್ರಾಣಿಗಳ ಅರಿವು ಮೂಡಿಸುವ ಶಿಬಿರ ಹಾಗೂ ಜಿಲ್ಲಾಮಟ್ಟದ ಶ್ವಾನ ಪ್ರದರ್ಶನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘‌‌ಎಲ್ಲರೂ ಪ್ರಾಣಿಗಳನ್ನು ಪ್ರೀತಿಸಬೇಕು. ಪ್ರಾಣಿಗಳ ಸಂತತಿ ಉಳಿಸಬೇಕು. ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ಮುಂದಿನ ದಿನಗಳಲ್ಲಿ ಪ್ರಾಣಿಗಳನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಲಿದೆ’ ಎಂದರು.

ಗೋಲ್ಡನ್‌ ರಿಟ್ರೀವರ್‌, ಪೊಮೆರಿಯನ್‌, ಶಿಟ್ಜು, ಜರ್ಮನ್ ಶೆಫರ್ಡ್‌, ಡಾಬರ್‌ಮನ್‌, ಪಗ್‌, ಸೈಬೇರಿಯನ್‌ ಹಸ್ಕಿ, ಅಮೆರಿಕನ್‌ ಬುಲ್ಲಿ, ರ‍್ಯಾಟ್‌ವಿಲ್ಲರ್‌, ಫ್ರೆಂಚ್‌ ಬುಲ್‌ಡಾಗ್‌, ಮುಧೋಳ್‌ ಮೊದಲಾದ 60 ತಳಿಯ ಶ್ವಾನಗಳು ಗಮನ ಸೆಳೆದವು. ಗಿಡ್ಡ ತಳಿಯ ಆಕಳುಗಳು ಪ್ರದರ್ಶನದಲ್ಲಿದ್ದವು. ಸ್ಪರ್ಧೆಯಲ್ಲಿ ಜಯ ಗಳಿಸಿದ ಶ್ವಾನಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ADVERTISEMENT

ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷ ಬಿರಾದಾರ, ಕೆ.ಸಿ.ಐ. ನ್ಯಾಯಾಧೀಶ ಸ್ಟೀವ್ ಅಲ್ಬೇಡಾ, ಕೆಎಂಎಫ್ ಜಂಟಿ ನಿರ್ದೇಶಕ ರಾಜಶೇಖರ ಪಾಟೀಲ, ಜಿಲ್ಲಾ ಪಾಲಿಕ್ಲಿನಿಕ್ ಉಪ ನಿರ್ದೇಶಕ ಪ್ರಮೋದ ಮೂಡಲಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ರವಿ ಸಾಲಿಗೌಡರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಹುಬ್ಬಳ್ಳಿಯ ಇಂದಿರಾ ಗಾಜಿನಮನೆ ಆವರಣದಲ್ಲಿ ಭಾನುವಾರ ನಡೆದ ಪ್ರಾಣಿಗಳ ಅರಿವು ಮೂಡಿಸುವ ಶಿಬಿರ ಹಾಗೂ ಜಿಲ್ಲಾಮಟ್ಟದ ಶ್ವಾನ ಪ್ರದರ್ಶನದಲ್ಲಿ ವಿವಿಧ ತಳಿಯ ನಾಯಿಗಳು ಗಮನಸೆಳೆದವು
ಹುಬ್ಬಳ್ಳಿಯ ಇಂದಿರಾ ಗಾಜಿನಮನೆ ಆವರಣದಲ್ಲಿ ಭಾನುವಾರ ನಡೆದ ಪ್ರಾಣಿಗಳ ಅರಿವು ಮೂಡಿಸುವ ಶಿಬಿರ ಹಾಗೂ ಜಿಲ್ಲಾಮಟ್ಟದ ಶ್ವಾನ ಪ್ರದರ್ಶನದಲ್ಲಿ ವಿವಿಧ ತಳಿಯ ನಾಯಿಗಳು ಗಮನಸೆಳೆದವು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.