
ಹುಬ್ಬಳ್ಳಿ: ‘ಅಧಿವೇಶನ ಪ್ರತಿಭಟನೆಯ ವೇದಿಕೆ, ಪಿಕ್‌ನಿಕ್ ಎಂಬಂತೆ ನಡೆದುಕೊಳ್ಳುವುದು ಸರಿಯಲ್ಲ. ಇದರ ಪಾವಿತ್ರ್ಯ ಕುಂದಿಸುವ ಕೆಲಸ ಆಗಬಾರದು’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಇಲ್ಲಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಾದೇಶಿಕ ಅಸಮಾನತೆ ದೂರಮಾಡಲು ಉತ್ತರ ಕರ್ನಾಟಕ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದರು.
‘ಸಾಮಾಜಿಕ ಬಹಿಷ್ಕಾರ ನಿಷೇಧ, ಧಾರ್ಮಿಕ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆ ಸೇರಿ 20ಕ್ಕೂ ಅಧಿಕ ಮಸೂದೆಗಳು ಮಂಡನೆಯಾಗಲಿವೆ’ ಎಂದು ಮಾಹಿತಿ ನೀಡಿದರು.
‘ಭದ್ರಾ ಮೇಲ್ದಂಡೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದ್ದ ₹5,300 ಕೋಟಿ ಕೊಟ್ಟಿಲ್ಲ, ಜಿಎಸ್‌ಟಿ ಪರಿಷ್ಕರಣೆಯಿಂದಾಗಿ ನಮಗೆ ನಷ್ಟವಾಗಿದೆ. ಈ ವಿಚಾರವನ್ನೂ ಚರ್ಚಿಸಲಾಗುವುದು’ ಎಂದರು.
ರಾಜಭವನವನ್ನು ಲೋಕಭವನ ಎಂದು ಮರು ನಾಮಕರಣ ಮಾಡುವುದು ಆಡಳಿತಾತ್ಮಕ ದೃಷ್ಟಿಯಿಂದ ಸರಿಯಲ್ಲ. ಇದಕ್ಕೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿದ್ದು ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.