ಹುಬ್ಬಳ್ಳಿ: ಅಕ್ಷರ ಸಾಹಿತ್ಯ ವೇದಿಕೆ ಮತ್ತು ಕಿಮ್ಸ್ ಸಹಯೋಗದಲ್ಲಿ ಭಾನುವಾರ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಗೋವಿಂದರಾಜು ಎಂ. ಕಲ್ಲೂರು ಅವರಿಗೆ, 'ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ'ಯನ್ನು ಭಾನುವಾರ ಪ್ರದಾನ ಮಾಡಲಾಯಿತು.
ಸಾಹಿತಿಗಳಾದ ಸುನಂದಾ ಕಡಮೆ, ಎಂ.ವಿ.ಅಡ್ನೂರು, ಚನ್ನಪ್ಪ ಅಂಗಡಿ, ಬಸು ಬೇವಿನಗಿಡದ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಪ್ರಹ್ಲಾದ ಅವರ ಪತ್ನಿ ವಿಜಯಾ ಅಗಸನಕಟ್ಟೆ ಹಾಗೂ ಸಾಹಿತಿ ನಿರ್ಮಲಾ ಶೆಟ್ಟರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.