ADVERTISEMENT

ಕೋಳಿವಾಡ ಮಾದರಿ ಗ್ರಾಮ ಮಾಡುವ ಕನಸು: ಕೋನರಡ್ಡಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2025, 13:52 IST
Last Updated 23 ಮಾರ್ಚ್ 2025, 13:52 IST
ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದ ನಂ.1 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಫದ ಶತಮಾನೋತ್ಸವ ಸಮಾರಂಭದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಅವರನ್ನು ಅಭಿನಂದಿಸಲಾಯಿತು
ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದ ನಂ.1 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಫದ ಶತಮಾನೋತ್ಸವ ಸಮಾರಂಭದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಅವರನ್ನು ಅಭಿನಂದಿಸಲಾಯಿತು   

ಹುಬ್ಬಳ್ಳಿ: ಕೋಳಿವಾಡ ನಂ.1 ವ್ಯವಸಾಯ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವದ ಸವಿನೆನಪಿಗಾಗಿ ನೂತನ ಕಟ್ಟಡ ನಿರ್ಮಿಸಲು ₹5 ಲಕ್ಷ ಅನುದಾನ ನೀಡುವುದಾಗಿ ನವಲಗುಂದ ಶಾಸಕ ಎನ್.ಎಚ್.‌ ಕೋನರಡ್ಡಿ ಹೇಳಿದರು.

ತಾಲ್ಲೂಕಿನ ಕೋಳಿವಾಡ ಗ್ರಾಮದಲ್ಲಿನ ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಶನಿವಾರ ನಡೆದ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕೋಳಿವಾಡ ಗ್ರಾಮವನ್ನು ಮಾದರಿ ಗ್ರಾಮ ಮಾಡುವ ಸಂಕಲ್ಪ ಮಾಡಿದ್ದೇನೆ. ಪದವಿಪೂರ್ವ ಕಾಲೇಜು ಪ್ರಾರಂಭಿಸಲು ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು’ ಎಂದು ತಿಳಿಸಿದರು.

ADVERTISEMENT

ಗದಗ ಜಿಲ್ಲೆಯ ಶಿರುಂಜ ಜ್ಞಾನಯೋಗಾಶ್ರಮದ ಬಸವರ ಸಮರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಂಕ್ರಪ್ಪ ಬಸಪ್ಪ ಯಳವತ್ತಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಕೆಪಿಸಿಸಿ ಸದಸ್ಯ ವಿಜಯ ಕುಲಕರ್ಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವೆಂದ್ರಪ್ಪ ಜಂತ್ಲಿ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಕೆ.ಎಂ.ಎಫ್.‌ ಮಾಜಿ ಅಧ್ಯಕ್ಷ ನೀಲಕಂಠ ಅಸೂಟಿ, ನಿಂಗನಗೌಡ ಪಾಟೀಲ, ಸಂಘದ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.