ADVERTISEMENT

24X7 ಕುಡಿಯುವ ನೀರು; ನೀಲನಕ್ಷೆ ಸಿದ್ಧ

ಧಾರವಾಡ ಜಿಲ್ಲೆಯ ಜನಪ್ರತಿನಿಧಿಗಳಿಂದ ತಾತ್ವಿಕ ಒಪ್ಪಿಗೆ: ಸಚಿವ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 16:38 IST
Last Updated 29 ಸೆಪ್ಟೆಂಬರ್ 2020, 16:38 IST
ಸಭೆಯಲ್ಲಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿದರು. ಶಾಸಕಿ ಕುಸುಮಾವತಿ ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಶಾಸಕ ಅಮೃತ ದೇಸಾಯಿ ಇದ್ದಾರೆ
ಸಭೆಯಲ್ಲಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿದರು. ಶಾಸಕಿ ಕುಸುಮಾವತಿ ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಶಾಸಕ ಅಮೃತ ದೇಸಾಯಿ ಇದ್ದಾರೆ   

ಹುಬ್ಬಳ್ಳಿ: ‘ಧಾರವಾಡ ಜಿಲ್ಲೆಯ ಎಲ್ಲಾ ಗ್ರಾಮಗಳಿಗೂ ಮಲಪ್ರಭಾ ನದಿಯಿಂದ ನಿರಂತರ (24X7) ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯ ನೀಲನಕ್ಷೆ ಸಿದ್ಧವಾಗಿದೆ. ಜಿಲ್ಲೆಯ ಜನಪ್ರತಿನಿಧಿಗಳೆಲ್ಲರೂ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರಯೋಜನೆ ಕುರಿತು ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಯೋಜನೆಯಪ್ರಾಥಮಿಕ ಸಿದ್ದತಾ ವರದಿಯನ್ನು ಎಸ್.ಟಿ.ಯು.ಪಿ ಕನ್ಸಲ್ಟೆಂಟ್‌ ಪ್ರತಿನಿಧಿಗಳು ಸಭೆಯಲ್ಲಿ ಮಂಡಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವೆಬ್‍ನಾರ್ ಮೂಲಕ ಸಭೆಯಲ್ಲಿ ಪಾಲ್ಗೊಂಡು, ಸಲಹೆ– ಸೂಚನೆ ನೀಡಿದರು’ ಎಂದರು.

ADVERTISEMENT

‘ಸಭೆಯ ನಿರ್ಣಯದ ವರದಿಯನ್ನುಜಿಲ್ಲಾ ಪಂಚಾಯ್ತಿ ಸಿಇಒ ಸರ್ಕಾರಕ್ಕೆ ಕಳಿಸಿ ಕೊಡಲಿದ್ದಾರೆ. ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಒಪ್ಪಿಗೆ ಪಡೆದು, ಸಂಪುಟ ಸಭೆಯಲ್ಲಿ ಯೋಜನಾ ವರದಿಯನ್ನು ಮಂಡಿಸಲಾಗುವುದು. ಅಲ್ಲಿ ಒಪ್ಪಿಗೆ ಸಿಕ್ಕ ನಂತರ, ಟೆಂಡರ್ ಕರೆಯಲಾಗುವುದು’ ಎಂದು ತಿಳಿಸಿದರು.

‘ಅವಳಿನಗರದ 24X7 ಕುಡಿಯುವ ನೀರಿನ ಯೋಜನೆಯ ಅಧ್ಯಯನಕ್ಕಾಗಿ ಎಲ್.ಎನ್.ಟಿ ಕಂಪನಿಗೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. 2021ರ ಮಾರ್ಚ್ ಬಳಿಕ, ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವಿಜಯಲಕ್ಷ್ಮಿಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ, ಸಿಇಒ ಡಾ. ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಇದ್ದರು.

ಅಂಕಿ ಅಂಶ..

₹1041.80 ಕೋಟಿ

24X7 ಯೋಜನೆಯ ಮೊತ್ತ

₹900.46 ಕೋಟಿ

ಯೋಜನೆಯ ಅನುಷ್ಠಾನಕ್ಕೆ ಮೀಸಲು

₹141 ಕೋಟಿ

ಐದು ವರ್ಷ ಯೋಜನೆಯ ನಿರ್ವಹಣೆಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.