
ಧಾರವಾಡ: ಅಕ್ರಮ ಸ್ಪಿರಿಟ್ ಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರು ವಾಸ ಇದ್ದ ಬಾಡಿಗೆ ಮನೆಯಲ್ಲಿ 51.46 ಕೆ.ಜಿ ಗಾಂಜಾ (ಅಂದಾಜು ಮೌಲ್ಯ ₹12.86 ಲಕ್ಷ), ಡಿಜಿಟಲ್ ಮಾಪನ ಯಂತ್ರ ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರ ನಗರ ಜಿಲ್ಲೆಯ ಆನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ (ಕೆೆಚ್‌ಬಿ ಜಾಗ) 3 ಬಾಡಿಗೆ ಮನೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಾದ ರೋನಿ ಅಲಿಯಾಸ್ ರಮೇಶ್ ಹಾಗೂ ಜಾನ್ ಪೌಲ್ ಅವರನ್ನು ಶನಿವಾರ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಕೋರ್ಟ್ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತೇಗೂರು ಭಾಗದಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 844 ಕ್ಯಾನ್ ಸ್ಪಿರಿಟ್ ಪತ್ತೆಯಾಗಿತ್ತು. ಪ್ರಕರಣದ ಆರೋಪಿಗಳು ಪರಾರಿಯಾಗಿದ್ದರು. ಗರಗ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ಧಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.