ADVERTISEMENT

Literature: ಕರ್ಕಿ ಪ್ರಶಸ್ತಿಗೆ ಕೃತಿಗಳು ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 23:43 IST
Last Updated 11 ನವೆಂಬರ್ 2025, 23:43 IST
ಸಂತೋಷ ಅಂಗಡಿ
ಸಂತೋಷ ಅಂಗಡಿ   

ಹುಬ್ಬಳ್ಳಿ: ಡಿ.ಎಸ್.ಕರ್ಕಿ ಸಾಹಿತ್ಯ ವೇದಿಕೆ ಟ್ರಸ್ಟ್‌ನ 2023ನೇ ಸಾಲಿನ ‘ಡಾ.ಡಿ.ಎಸ್.ಕರ್ಕಿ ಕಾವ್ಯ ಪ್ರಶಸ್ತಿ’ಗೆ ಗದಗ ಜಿಲ್ಲೆ ಶಿರಹಟ್ಟಿಯ ಸಂತೋಷ ಅಂಗಡಿ ಅವರ ‘ಭವದ ಅಗುಳಿ’ ಮತ್ತು 2024ನೇ ಸಾಲಿನ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಯಡ್ರಾವಿಯ ರಾಮಚಂದ್ರ ಎಸ್.ಕುಲಕರ್ಣಿ ಅವರ ‘ಅರ್ಥವಿಲ್ಲ ಸ್ವಾರ್ಥವಿಲ್ಲ ಬರಿಯ ಭಾವಗೀತಾ’ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ

‘ಹುಬ್ಬಳ್ಳಿಯಲ್ಲಿ ನವೆಂಬರ್ 16ರಂದು ಸಂಜೆ 5.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಾಹಿತಿ ಜಯಂತ ಕಾಯ್ಕಿಣಿ, ಕವಿ ಸತೀಶ ಕುಲಕರ್ಣಿ ಮತ್ತು ಸಂಸದ ಜಗದೀಶ ಶೆಟ್ಟರ್ ಭಾಗವಹಿಸುವರು’ ಎಂದು ಟ್ರಸ್ಟ್ ಅಧ್ಯಕ್ಷ ಎಂ.ಎ.ಸುಬ್ರಹ್ಮಣ್ಯ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಮಚಂದ್ರ ಎಸ್.ಕುಲಕರ್ಣಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT