ADVERTISEMENT

ಸಂಭ್ರಮದ ಗಾಳಿ ದುರ್ಗಮ್ಮದೇವಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 16:24 IST
Last Updated 19 ಜುಲೈ 2022, 16:24 IST
ಹುಬ್ಬಳ್ಳಿಯ ಹೊಸೂರಿನಲ್ಲಿ ಆಷಾಢ ಮಾಸದ ಮೂರನೇ ಮಂಗಳವಾರದ ಅಂಗವಾಗಿ ನಡೆದ ಜಾತ್ರಾ ಮಹೋತ್ಸವದಲ್ಲಿ ಗಾಳಿ ದುರ್ಗಮ್ಮದೇವಿಯ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು 
ಹುಬ್ಬಳ್ಳಿಯ ಹೊಸೂರಿನಲ್ಲಿ ಆಷಾಢ ಮಾಸದ ಮೂರನೇ ಮಂಗಳವಾರದ ಅಂಗವಾಗಿ ನಡೆದ ಜಾತ್ರಾ ಮಹೋತ್ಸವದಲ್ಲಿ ಗಾಳಿ ದುರ್ಗಮ್ಮದೇವಿಯ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು    

ಹುಬ್ಬಳ್ಳಿ: ಆಷಾಢ ಮಾಸದ ಮೂರನೇ ಮಂಗಳವಾರದ ಅಂಗವಾಗಿನಗರದ ಹೊಸೂರಿನ ಗಾಳಿ ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಜಾತ್ರೆ ಅಂಗವಾಗಿ ಬೆಳಿಗ್ಗೆ 5 ಗಂಟೆಗೆ ದೇವಿಯ ಮೂರ್ತಿಗೆ ಅಭಿಷೇಕ, ಮಹಾಪೂಜೆ, ನಂತರ ಪಲ್ಲಕ್ಕಿ ಉತ್ಸವ ನಡೆಯಿತು. ಮಹಿಳೆಯರು ಪೂರ್ಣಕುಂಭ, ಕಳಶ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ವಿವಿಧ ಕಲಾತಂಡಗಳು ಜಾತ್ರೆಯ ಮೆರುಗು ಹೆಚ್ಚಿಸಿದವು.

ಬೆಳಿಗ್ಗೆಯಿಂದ ಸಂಜೆವರೆಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ರಾತ್ರಿ ಅನ್ನಸಂತರ್ಪಣೆ ನಡೆಯಿತು.

ADVERTISEMENT

ಕೋವಿಡ್‌ ಕಾರಣ ಕಳೆದ ಎರಡು ವರ್ಷಗಳಿಂದ ಜಾತ್ರೆ ನಡೆದಿರಲಿಲ್ಲ. ಬಾಗಲಕೋಟೆ, ವಿಜಯಪುರ, ಬೆಂಗಳೂರು, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ವಿವಿಧೆಡೆಯ ಭಕ್ತರು ಬಂದು ದರ್ಶನ ಪಡೆದರು ಎಂದು ಗಾಳಿ ದುರ್ಗಮ್ಮದೇವಿ ಸೇವಾ ಸಮಿತಿ ಅಧ್ಯಕ್ಷ ಸಂತೋಷ ಹಿರೇಕೆರೂರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.